ಕಥಾ ಪ್ರಶಸ್ತಿಗೆ ಸಾಹಿತಿ ಡಾ.ಚನ್ನಪ್ಪ ಕಟ್ಟಿ ಆಯ್ಕೆ.

ಸಿಂದಗಿ: ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ವತಿಯಿಂದ ನೀಡಲಾಗುವ 2022ನೇ ಸಾಲಿನ ಕಥಾ ಪ್ರಶಸ್ತಿಗೆ ಕಥೆಗಾರ, ಸಾಹಿತಿ, ಡಾ.ಚನ್ನಪ್ಪ ಕಟ್ಟಿ ಆಯ್ಕೆಯಾಗಿದ್ದಾರೆ.
ಜೀವಮಾನ ಸಾಧನೆ ಗುರುತಿಸಿ ಡಾ.ಚನ್ನಪ್ಪ ಕಟ್ಟಿ ಅವರಿಗೆ 2022ನೆಯ ಸಾಲಿನ ಕಥಾ ಪ್ರಶಸ್ತಿ ನೀಡಲು ಪ್ರತಿಷ್ಠಾನದ ಸರ್ವಸದಸ್ಯರ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಪ್ರಶಸ್ತಿಯು ₹50 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ತಿಳಿಸಿದ್ದಾರೆ.