ಸಮ್ಮಿಶ್ರ ಸರ್ಕಾರ ಉರುಳಿಸಲು ಸಿದ್ದರಾಮಯ್ಯ ಕಾರಣ?

ಸಾಮಾಜಿಕ ಜಾಲತಾಣ: ಮಾಜಿ ಆರೋಗ್ಯ ಸಚಿವ ಗುಲಾಂ.ಕೆ.ಸುಧಾಕರ ತಮ್ಮ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಇಂದು ಹಾಕಿರುವ ಒಂದು ಪೋಸ್ಟ್ ಸಂಚಲನ ಮೂಡಿಸಿದೆ. 

ಅವರು ಹಿಂದಿನ ಜೆಡಿಎಸ್-ಕಾಂಗ್ರೇಸ್ ಸಮ್ಮಿಶ್ರ ಸರಕಾರ ಬೀಳಿಸುವ ಹುನ್ನಾರದ ಬಗ್ಗೆ ಕೆಲವು ಸಂಗತಿಗಳನ್ನು ಹೊರಹಾಕಿದಂತೆ ಕಾಣಸಿಗುತ್ತಿದೆ.

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.

2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.

ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.

ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?

ಈ ರೀತಿ ಪ್ರಶ್ನೆ ಹಾಕಿರುವ ಸುಧಾಕರ ಬರಹಗಳು ಸಿದ್ದರಾಮಯ್ಯ ನವರಿಗೆ ಮುಖ್ಯಮಂತ್ರಿ ಕನಸಿಗೆ ಉರುಳಾಗಬಹುದು.

https://m.facebook.com/story.php?story_fbid=pfbid02Pj6hEaCHPQueSGphxjRD4Zxwdifb8VNv97mSZH551Pa6zgQvFkFRmn5JXCYXfKbrl&id=100044978059684&mibextid=Nif5oz


Comments

Leave a Reply

Your email address will not be published. Required fields are marked *